Skip to main content
www.kallianpur.com | Email : kallianpur7@gmail.com | Mob : 9741001849

ಅಬಕಾರಿ ಸುಂಕ ಹೆಚ್ಚಳವನ್ನು ಕಡಿಮೆಗೊಳಿಸುವಂತೆ ಮಹಾ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಫೆಡರೇಶನ್ ಆಫ್ ಹೊಟೇಲ್ ಎಂಡ್ ರೆಸ್ಟೊರೆಂಟ್ ಅಸೋಸಿಯೇಶನ್ಸ್

By March 2, 2023Mumbai News

(ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ (ಆರ್‌ಬಿಐ), ಮಾ.೦೨: ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ೨೦೨೩-೨೦೨೪ರ ಸಾಲಿನ ಶೇ ೧೫ರಷ್ಟು ಅಬಕಾರಿ ಸುಂಕ ಹೆಚ್ಚಳವನ್ನು ಕಡಿತ ಮಾಡುವಂತೆ ಫೆಡರೇಶನ್ ಆಫ್ ಹೊಟೇಲ್ ಹಾಗೂ ರೆಸ್ಟೊರೆಂಟ್ ಅಸೋಸಿಯೇಶನ್ ನಿಯೋಗವು ಫೆಡರೇಶನ್‌ನ ಅಧ್ಯಕ್ಷ ಡಾ| ವಿರಾರ್ ಬಿ. ಶಂಕರ್ ಶೆಟ್ಟಿ ಅವರ ನೇತೃತ್ವ ಹಾಗೂ ಮೀರಾ ಭಯಂದರ್ ಶಾಸಕಿ ಗೀತಾ ಜೈನ್ ಮುಂದಾಳತ್ವದಲ್ಲಿ ಕಳೆದ ಮಂಗಳವಾರ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ಮು ಭೇಟಿ ಮಾಡಿ ಮನವಿ ಸಲ್ಲಿಸಿತು.

ಕೊರೊನಾ ಹಾವಳಿಯಿಂದ ಕಂಗೆಟ್ಟಿರುವ ಹೊಟೇಲು ಉದ್ಯಮ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುವ ಸಮಯದಲ್ಲಿಯೇ ಸುಂಕ ದರ ಹೆಚ್ಚಳವು ಉದ್ಯಮಕ್ಕೆ ಮಾರಕ ಹೊಡೆತ ಬಿದ್ದಂತಾಗಿದೆ. ಮಾತ್ರವಲ್ಲದೆ ಸರಕಾರದ ನಿಯಮಾವಳಿಗಳ ಪ್ರಕಾರ ಕ್ರಮಬದ್ದವಾಗಿ ಉದ್ಯಮವು ಮುಂದುವರಿಯುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಉದ್ಯಮಕ್ಕೆ ಅಬಕಾರಿ ಸುಂಕ ಹೆಚ್ಚಳದಿಂದ ತುಂಬಲಾರದ ನಷ್ಟವಾಗುತ್ತಿದೆ ಎಂದು ನಿಯೋಗವು ಮುಖ್ಯಮಂತ್ರಿಯಾಅವರಿಗೆ ಪೂರ್ಣ ಮಾಹಿತಿಯೊಂದಿಗೆ ಮನವರಿಕೆ ಮಾಡಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ಸಂಬಂಧಿತ ಇಲಾಖೆಯಿಂದ ಮಾಹಿತಿ ಪಡೆದು ನಿಯೋಗ ದೊಂದಿಗೆ ಚರ್ಚಿಸಿದರು.

ಹೊಟೇಲ್ ಉದ್ಯಮದ ಸಂಕಷ್ಟಗಳನ್ನು ಆಲಿಸಿದ ಮುಖ್ಯಮಂತ್ರಿಯವರು ಸರಕಾರದ ಅಬಕಾರಿ ಮಂತ್ರಿ ಶಂಭುರಾಜ್ ದೇಸಾಯಿ ಅವರಲ್ಲಿ ದೂರವಾಣಿ ಮೂಲಕ ಮಾತುಕತೆ ನಡೆಸಿ ಸುಂಕ ಹೆಚ್ಚಳವನ್ನು ಕಡಿಮೆಗೊಳಿಸುವಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಂತೆಯೇ ಅಲ್ಲಲ್ಲಿ ತಲೆಯೆತ್ತುತ್ತಿರುವ ಅನಧಿಕೃತ ಡಾಬಗಳಿಂದಾಗುವ ತೊಂದರೆಗಳ ಬಗ್ಗೆಯೂ ನಿಯೋಗವು ಮುಖ್ಯಮಂತ್ರಿ ಯವರ ಗಮನಕ್ಕೆ ತಂದಿದ್ದು ಈ ಬಗ್ಗೆ ಹಾಗೂ ಅಬಕಾರಿ ಸುಂಕದ ಹೆಚ್ಚಳವನ್ನು ಶೇ. ೫ ರಿಂದ ೧೦ರಷ್ಟು ಕಡಿಮೆ ಮಾಡುವ ಭರವಸೆಯನ್ನು ನಿಯೋಗಕ್ಕೆ ನೀಡಿದರು.

ನಿಯೋಗದಲ್ಲಿ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಸಾಲ್ಯಾನ್ ಉಪಾಧ್ಯಕ್ಷರುಗಳಾದ ಶ್ಯಾಮ್ ಎನ್. ಶೆಟ್ಟಿ, ದಯಾನಂದ ಎಸ್. ಶೆಟ್ಟಿ, ಸುರೇಂದ್ರ ರೈ, ಜೊತೆ ಕಾರ್ಯದರ್ಶಿ ಭಾಸ್ಕರ್ ಶೆಟ್ಟಿ, ಫೆಡರೇಶನ್‌ನ ಸಲಹೆಗಾರ ಕಳತ್ತೂರು ವಿಶ್ವನಾಥ ಶೆಟ್ಟಿ, ಕಲ್ಯಾಣ್ ಹೊಟೇಲ್ ಎಸೋಸಿಯೇಶನ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಾಕೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಬಾಬು ಶೆಟ್ಟಿ, ಮೀರಾಭಯಂದರ್ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಮಧುಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.