Skip to main content
www.kallianpur.com | Email : kallianpur7@gmail.com | Mob : 9741001849

ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಆರಂಭ

By November 28, 2022Kannada News

ವರದಿ : ರೋನ್ಸ್ ಬಂಟ್ವಾಳ್

ಉಜಿರೆ: ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ. ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ ೭.೦೦ ಗಂಟೆಯಿಂದ ರಾತ್ರಿ ೧೨.೦೦ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. ೨೦೨೩ರ ಮೇ ೨೩ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ. ಆಧ್ಯಾತ್ಮಿಕ ಮತ್ತು ಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆ ಶನಿವಾರ ಚಾಲನೆ ನೀಡಿ ಶುಭ ಹಾರೈಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಶ್ರೀಮತಿ ಸುಪ್ರಿಯಾ ಹೆಚ್. ಕುಮಾರ್‌ರವರು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.