Skip to main content
www.kallianpur.com | Email : kallianpur7@gmail.com | Mob : 9741001849

ಧರ್ಮಸ್ಥಳದಲ್ಲಿ ೫೨ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ೧೨೩ ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ.

By May 2, 2024News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಚಿತ್ರ: ಧರ್ಮಸ್ಥಳದಲ್ಲಿ ಬುಧವಾರ ನಡೆದ ೫೨ನೆ ವರ್ಷದ ಉಚಿತ ವಿವಾಹ ಸಮಾರಂಭದಲ್ಲಿ ಚಲನಚಿತ್ರ ನಟ ದೊಡ್ಡಣ್ಣ ಮತ್ತು ಪತ್ನಿ ಶಾಂತಾ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಮಂಗಳಸೂತ್ರ ವಿತರಿ ಸಿದರು.

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ ೬.೪೫ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೩೯ ಜೊತೆ ಅಂತರ್ಜಾತಿ ಯ ವಿವಾಹ ಸೇರಿದಂತೆ ಒಟ್ಟು ೧೨೩ ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

ಬುಧವಾರ ಬೆಳಿಗ್ಯೆಯಿಂದಲೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿ ಸಿದರು. ಸಂಜೆ ೬ ಗಂಟೆಯಿಂದ ವಧೂ-ವರ ಜೋಡಿ ದೇವಸ್ಥಾ ನಕ್ಕೆ ಪ್ರದಕ್ಷಿಣೆ ಬಂದು ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಹೋದರು.

ಮುಹೂರ್ತಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಮತ್ತು ಚಲನಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳ ಸೂತ್ರ ವಿತರಿಸಿದರು. ಆಯಾ ಜಾತಿ- ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸಂಜೆ ಗಂಟೆ: ೬.೪೫ಕ್ಕೆ ಸರಿಯಾಗಿ ಗೋಧೂಳಿಲಗ್ನ ಸುಮುಹೂರ್ತದಲ್ಲಿ ವೇದಿಕೆಯಿಂದ ವೇದ-ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಳಸೂತ್ರ ಧಾರಣೆ ಮಾಡಿದರು.

ಗಣ್ಯರ ಹಿತವಚನ:

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು : ಚಲನಚಿತ್ರನಟ ದೊಡ್ಡಣ್ಣ ತಾಯಿ-ತಂದೆ ತಮ್ಮ ಮಕ್ಕಳಿಗೆ ಬಾಲ್ಯದಿಂದ ಲೇ ಉತ್ತಮ ಸಂಸ್ಕಾರ ನೀಡಿ ಸಮಾಜದ ಸಜ್ಜನರಾಗಿ, ಉತ್ತಮ ಚಾರಿತ್ರ್ಯವಂತರಾಗಿ ಮತ್ತು ಸಭ್ಯ-ಸುಸಂಸ್ಕೃತ ನಾಗರಿಕರಾಗಿ ರೂಪಿಸಬೇಕು. ತನ್ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕು ಎಂದು ಚಲನಚಿತ್ರ ನಟ ದೊಡ್ಡಣ್ಣ ನೂತನ ದಂಪತಿಗಳಿಗೆ ಕಿವಿಮಾತು ಹೇಳಿದರು.

ತಾಯಿ-ತಂದೆ ಮಾಡಿದ ದಾನ-ಧರ್ಮ, ಸತ್ಕಾರ್ಯದ ಪುಣ್ಯ ಅವರ ಮಕ್ಕಳಿಗೂ ಲಭಿಸುತ್ತದೆ. ಯಾವುದೇ ನೀತಿ, ಧರ್ಮ, ಸಂಸ್ಕಾರ ಕಲಿಯಲು ವಯಸ್ಸಿನ ಇತಿ- ಮಿತಿ ಇಲ್ಲ. ರಾಮಾಯ ಮತ್ತು ಮಹಾಭಾರತದಂತಹ ಪೌರಾಣಿಕ ಕೃತಿಗಳ ಅಧ್ಯಯನ ದೊಂದಿಗೆ ಸ್ವಾಧ್ಯಾಯ ಮಾಡಬೇಕು. ದೇವಸ್ಥಾನಕ್ಕೆ ಹೋಗು ವಾಗ ಸಂಚಾರಿದೂರವಾಣಿ ಕೊಂಡು ಹೋಗಬಾರದು. ದೇವರ ಎದುರು ಕಣ್ಣು ಮುಚ್ಚಬಾರಾದು. ತೆರೆದ ಕಣ್ಣುಗಳಿಂದ ಏಕಾಗ್ರತೆಯೊಂದಿಗೆ ದೇವರ ದರ್ಶನ, ಧ್ಯಾನ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಪ್ರೀತಿ-ವಿಶ್ವಾಸ, ಪರೋಪಕಾರ ಸೇವಾಕಳಕಳಿ, ಸಾಮಾಜಿಕ ಬದ್ಧತೆ ಮೊದಲಾದ ಮಾನವೀಯಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಯವರು, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ಸಾಮೂಹಿಕ  ವಿವಾಹದಿಂದಾಗಿ ವರದಕ್ಷಿಣೆ ಪಿಡುಗು ಮತ್ತು ಮದುವೆಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ನೂತನ ದಂಪತಿಗಳು ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿ ಸಬೇಕು. ಮದುವೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಂಸ್ಕಾರ ಯುತ ಜೀವನ ನಡೆಸಬೇಕು. ಗ್ರಾಮೀಣ ಪ್ರದೇಶವನ್ನು ತ್ಯಜಿಸಿ ನಗರಕ್ಕೆ ವಲಸೆ ಹೋಗುವುದನ್ನು ತಡೆಯಬೇಕು ಎಂದು ಕಿವಿಮಾತು ಹೇಳಿದರು.

ಸಾಮೂಹಿಕ ವಿವಾಹಕ್ಕೆ ಅನೇಕ ಮಂದಿ ದಾನಿಗಳು ಸೀರೆ, ಮಂಗಳಸೂತ್ರ ಹಾಗೂ ಹೂಮಾಲೆಯನ್ನು ಉದಾರವಾಗಿ ದಾನ ನೀಡಿದ್ದಾರೆ. ನಿರೀಕ್ಷೆಗಿಂತಲೂ ಮಿಗಿಲಾಗಿ ದಾನ ಹರಿದುಬರುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಂತಾ ದೊಡ್ಡಣ್ಣ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿ ದರು. ನೂತನ ದಂಪತಿಗಳು ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ಊರಿಗೆ ಹೋದರು.

ಮುಖ್ಯಾಂಶಗಳು:
* ಮದುವೆಗಾಗುವ ದುಂದುವೆಚ್ಚ ಮತ್ತು ವರದಕ್ಷಿಣೆ ತಡೆಗಟ್ಟಲು ೧೯೭೨ ರಲ್ಲಿ ೮೮ ಜೊತೆ ಮದುವೆಯೊಂದಿಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದರು.

*ಪ್ರತಿವರ್ಷ ಎಪ್ರಿಲ್/ಮೇ ತಿಂಗಳಿನಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ನಡೆಸಲಾಗುತ್ತದೆ.

*ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಿ ಮದುವೆಯ ಎಲ್ಲಾ ವೆಚ್ಚ ವನ್ನು ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತದೆ.

*ಕಳೆದ ವರ್ಷದವರೆಗೆ ೧೨,೭೭೭ ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿ ಯ ಜೀವನ ನಡೆಸುತ್ತಿದ್ದಾರೆ. ಈವರೆಗೆ ಒಂದು ಕೂಡಾ ವಿಚ್ಛೇದನ ಪ್ರಕರಣ ವರದಿಯಾಗಿಲ್ಲ ಎಂಬುದು ಗಮನಿಸ ಬೇಕಾದ ಅಂಶ.

*ದೇವರ ದರ್ಶನ ಮಾಡುವಾಗ ಕಣ್ಣುಮುಚ್ಚಬಾರದು : ದೊಡ್ಡಣ್ಣ

*ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಗದಗದ ಪ್ರವೀಣ ಖನ್ನೂರು ಮತ್ತು ಕವಿತಾ ಗಿಡಕೆಂಚಣ್ಣವರ್ ಪರಸ್ಪರ ಪ್ರೀತಿಸಿ ಮದುವೆಗೆ ಒಪ್ಪಿದ್ದು ಅವರಿಗೆ ೧೨,೯೦೦ನೇ ಜೋಡಿ ಎಂಬ ವಿಶೇಷ ಮಾನ್ಯತೆಯೊಂದಿಗೆ ಪ್ರತ್ಯೇಕ ವೇದಿಕೆ ನಿರ್ಮಿಸ ಲಾಯಿತು.

*ಸಾಂಪ್ರದಾಯಿಕ ಶೋಭಾನೆ ಹಾಡುಗಳು ಮದುವೆಗೆ ವಿಶೇಷ ಶೋಭೆ ನೀಡಿದವು.

*ಧರ್ಮಸ್ಥಳದ ವತಿಯಿಂದ ನೂತನ ದಂಪತಿಗಳಿಗೆ ವಿಶೇಷ ಉಡುಗೊರೆ ನೀಡಿ ಸತ್ಕರಿಸಲಾಯಿತು.

*ಧರ್ಮ, ಅರ್ಥ ಮತ್ತು ಕಾಮದಲ್ಲಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಸಹಚರರಾಗಿ, ಯಾವುದೇ ದುರಭ್ಯಾಸಕ್ಕೆ ಬಲಿಯಾಗದೆ ಸಾರ್ಥಕ ಜೀವನ ನಡೆಸುವುದಾಗಿ ದಾಂಪತ್ಯದೀಕ್ಷೆಯನ್ನು ಸ್ವೀಕರಿಸಿದರು.

*ಅನೇಕ ಮಠ-ಮಂದಿರಗಳು ಹಾಗೂ ರೋಟರಿ ಕ್ಲಬ್ ನಂತಹ ಸೇವಾ ಸಂಸ್ಥೆಗಳು ಇದನ್ನು ಮಾದರಿ ಕಾರ್ಯಕ್ರಮ ಎಂದು ಮಾನ್ಯತೆ ನೀಡಿ ಅಲ್ಲಲ್ಲಿ ಸಾಮೂಹಿಕ ವಿವಾಹ ನಡೆಸುತ್ತಿರುವುದು ತನಗೆ ಸಂತೋಷ ನೀಡುತ್ತಿದೆ ಎಂದು ಡಿ. ವೀರೇಂದ್ರ ಹೆಗ್ಗಡೆ ಯವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

*ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗೆ ವಿವಾಹ ನೋಂದಣಿ ಕಚೇರಿಯ ಅಧಿಕಾರಿಗಳು ಅಧೀಕೃತ ಪ್ರಮಾಣಪತ್ರ ನೀಡುತ್ತಾರೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.