
kallianpurdotcom: Mob 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಅ.೦೩: ಮಂಗಳೂರು, ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್. ಬಂಗೇರಾ ಹಾಗೂ ಗ್ಲೋಬಲ್ ಸಿಂಪತಿ ಫೌಂಡೇಶನ್ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಪರಿಸರ ಪ್ರೇಮದ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆವರಣ ದಲ್ಲಿರುವ ಫ್ರೂಟ್ಸ್ ಪಾರ್ಕ್ ನಲ್ಲಿ ರಂಬೂಟಾನ್ ಗಿಡಗಳನ್ನು ನೆಟ್ಟು ಉಭಕೋರಿದರು. ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ಹಸ್ತಾಂತರಿಸ ಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂತಾರಾಷ್ಟ್ರೀಯ ಜೂಡೋ ತರಬೇತುದಾರ ಯತೀಶ್ ಎನ್.ಬಂಗೇರಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿರುವ ಈ ಸರಕಾರಿ ಶಾಲೆ ಮಾದರಿಯಾಗಿದೆ. ಈ ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ ನೀಡಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಜೂಡೋ ತರಬೇತಿ ನೀಡಲಾಗುವುದು. ಈ ಮೂಲಕ ಒಲಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಗ್ರಾಮೀಣ ಪ್ರದೇಶದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೂ ಭಾಗವಹಿಸಲು ಅವಕಾಶ ಮಾಡಿ ಕೊಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ಕನಕ ವರ್ಮ ಜೈನ್ ಶಾಲಾ ಮುಖ್ಯ ಗುರು ಫ್ಲೆವಿಯಾ ಡಿ’ಸೋಜಾ, ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.