kallianpurdotcom: 23/09/23
(ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ (ಆರ್‌ಬಿಐ), ಅ.೨೩: ಬರುವ ನ.೪-೫ ರಂದು ಮಂಗಳೂರುನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ ೨೫ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್‌ವೆಲ್ ಇಲ್ಲಿನ ರಾಹುಲ್ ಎಡ್ವರ್ಟೆರರ್ಸ್ ಕಛೇರಿಯಲ್ಲಿ ನಡೆಯಿತು.
ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ದೀಪ ಬೇಳಗಿಸಿ, ಸಮ್ಮೇಳನ ಕಾರ್ಯಾಲಯ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆಗೆ ವಿದ್ಯುಕ್ತ ಚಾಲನೆ ನೀಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಗೋಕುಲದಾಸ ಪ್ರಭು, ಶಾಲೆಗಳಲ್ಲಿ ಕೊಂಕಣಿ ಶಿಕ್ಷಣ ಚಳುವಳಿಯ ನೇತಾರ, ಖ್ಯಾತ ಹೃದ್ರೋಗ ತಜ್ಞ ಡಾ| ಕಸ್ತೂರಿ ಮೋಹನ ಪೈ, ಮಾತೃ ಸಂಸ್ಥೆ ಅಖಿಲ ಭಾರತ ಕೊಂಕಣಿ ಸಾಹಿತ್ಯ ಪರಿಷತ್ತ್ ನ ಕಾರ್ಯಾಧ್ಯಕ್ಷ ಚೇತನ್ ಆಚಾರ್ಯ, ಗೋವಾ, ಸಾಹಿತ್ಯ ಅಕಾಡೆಮಿ ನವ ದೆಹಲಿ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ಕೊಂಕಣಿ ಕವಿ, ಚಿಂತಕ ಟೈಟಸ್ ನೊರೊನ್ಹಾ ಹಾಜರಿದ್ದರು.
ಚೇತನ್ ಆಚಾರ್ಯ, ಗೋವಾ ಅಖಿಲ ಭಾರತ ಕೊಂಕಣಿ ಪರಿಷತ್ ಸ್ಥಾಪನೆ, ಪರಿಷತ್ತಿನ ಧ್ಯೇಯೋದ್ದೇಶಗಳು, ಈ ವರೆಗೆ ಭಾರತದಾದ್ಯಂತ ನಡೆದ ಕೊಂಕಣಿ ಭಾಷಾ ಚಳುವಳಿಗಳು, ಕೊಂಕಣಿ ಭಾಷೆಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಲಭಿಸಲು ಪರಿಷತ್ ವತಿಯಿಂದ ಹಿರಿಯರು ನಡೆಸಿದ ಹೋರಾಟ ಮತ್ತು ಕೊಂಕಣಿ ಭಾಷೆಯ ಬೆಳವಣಿಗೆಯ ನಿಟ್ಟಿನಲ್ಲಿ ಎದುರಿಸಬೇಕಾದ ಸವಾಲುಗಳು ಬಗ್ಗೆ ವಿವರಿಸಿದರು.
ಮೆಲ್ವಿನ್ ರೊಡ್ರಿಗಸ್ ಮಂಗಳೂರಿನಲ್ಲಿ ಸುಮಾರು ಮೂರು ದಶಕಗಳ ಹಿಂದೆ ನಡೆದ ಪರಿಷತ್ತಿನ ಅಧಿವೇಶನವನ್ನು ಸ್ಮರಿಸಿ, ಇದೇ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ೨೫ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ರಜತ ಸಮ್ಮೇಳನವನ್ನು ಸ್ಮರಣಾರ್ಹ ಮಾಡುವ ನಿಟ್ಟಿನಲ್ಲಿ ಕೊಂಕಣಿಗಾಗಿ ಶ್ರಮಿಸುವ ಸಂಘ ಸಂಸ್ಥೆಗಳ ಸಹಕಾರ ಕೋರಿದರು.
ಕಾರ್ಯಕ್ರಮಕ್ಕೆ ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಬಂಟ್ವಾಳ್‌ಕರ್, ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ವಿಭಾಗ ಮುಖ್ಯಸ್ಥೆ ಪ್ರೊ| ಪ್ಲೋರಾ ಕಾಸ್ತೆಲಿನೊ, ಖ್ಯಾತ ನಿರೂಪಕಿ ಸುಚಿತ್ರಾ ಎಸ್. ಶೆಣೈ, ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವೇಂಕಟೇಶ ನಾಯಕ್, ರಾಕ್ಣೊ ಪತ್ರಿಕೆಯ ಸಂಪಾದಕ ವಂ| ರೂಪೇಶ್ ಮಾಡ್ತಾ, ಉಜ್ವಾಡ್ ಪತ್ರಿಕೆಯ ಸಂಪಾದಕ ವಂ| ಆಲ್ವಿನ್ ಕಾರ್ಮೆಲಿತ್, ಕೊಂಕಣಿ ನಾಟಕ ಸಭಾದ ಫ್ಲೋಯ್ಡ್ ಕಾಸ್ಸಿಯಾ, ಜೆರಾಲ್ದ್ ಕೊನ್ಸೆಸೊ, ಆಕಾರ್ ಸಂಸ್ಥೆಯ ದಯಾ ವಿಕ್ಟರ್ ಲೋಬೊ, ಸಾಹಿತಿ ವಿನ್ಸೆಂಟ್ ಪಿಂಟೊ, ಆಂಜೆಲೋರ್ ಮತ್ತಿತರರು ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಸಾಹಿತ್ಯ ಅಕಾಡೆಮಿ, ನವದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿ ಸದಸ್ಯ ಎಚ್ಚೆಮ್, ಪೆರ್ನಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.