Skip to main content

ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ.

By November 11, 2026Kannada News
kallianpurdotcom: Mob 9741001849
Official release from Creative PU College.  

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ  ಖೇಲೋ ಕ್ರಿಯೇಟಿವ್ ಕ್ರೀಡಾಕೂಟ ನಡೆಸಲಾಯಿತು. ಸಭಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಆದರ್ಶ ಎಂ.ಕೆ  ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು.

ಈ ಸಂದ ರ್ಭದಲ್ಲಿ  ಮತ್ತೋರ್ವ ಅಥಿತಿಗಳಾದ  ಕಾರ್ತಿಕ್ ಭಂಡಾರಿ, ಉಪ ಪ್ರಾಂಶುಪಾಲರಾದ ಜೋಯೆಲ್ ಮನೋಜ್ ಫರ್ನಾಂಡಿಸ್, ಕ್ರೀಡಾ ಸಂಚಲಾಕರಾದ ಮಂಜುನಾಥ್ ಕೆ.ವಿ, ತೀರ್ಪುಗಾರರಾಗಿ ಆಗಮಿಸಿದ  ಸಂತೋಷ್ ಹಾಗೂ ಶಿವಾನಂದ್  ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಸರ್ವರನ್ನು ಸ್ವಾಗತಿಸುವುದರ ಜೊತೆಗೆ ಪ್ರಾಸ್ತಾವಿಕ ನುಡಿಗಳಾಡಿದರು. ಹಿಂದಿ ಉಪನ್ಯಾಸಕ ಮಂಜುನಾಥ್ ಕೆ. ವಿ. ವಂದಿಸಿದರು.

ಸಭಾ ಕಾರ್ಯಕ್ರಮದ ನಂತರ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಆದರ್ಶ ಎಂ. ಕೆ. ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ತುಂಬುವುದರ ಜೊತೆಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು. ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಸಹಕರಿಸಿದರು.ಕನ್ನಡ ಉಪನ್ಯಾಸಕರಾದ ಆದರ್ಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.