Skip to main content
www.kallianpur.com | Email : kallianpur7@gmail.com | Mob : 9741001849

ಬ್ಯೂಟಿಪಾರ್ಲರ್-ಮದುಮಗಳ ಶೃಂಗಾರ- ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ ಉದ್ಯೋಗ ಕೌಶಲ್ಯದಿಂದ ಮಹಿಳೆ ಸ್ವಾವಲಂಬಿಯಾಗಬಹುದು-ಹೇಮಾವತಿ ಹೆಗ್ಗಡೆ.

By April 8, 2024Mumbai News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಎ.೦೮: ಶಿಕ್ಷಣ ಮತ್ತು ಉದ್ಯೋಗ ಕೌಶಲದ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆ ಹೇಳಿದರು.

ಇಂದಿಲ್ಲಿ ಸೋಮವಾರ ಉಜಿರೆಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಒಂದು ತಿಂಗಳು ನಡೆದ ಸಮಾರಂಭದಲ್ಲಿ ಶಿಬಿರಾಥಿಗಳಿಗೆ ಪ್ರಮಾಣಪತ್ರ ವಿತರಿಸಿ ಹೇಮಾವತಿ ಶುಭ ಹಾರೈಸಿದರು.

ಮಹಿಳೆಯರು ಸೀಮಿತ ವಿಷಯಕ್ಕೆ ಮಾತ್ರ ಅಂಟಿಕೊಳ್ಳದೆ ತಮಗೆ ಸಿಗುವ ಅವಕಾಶಗಳ ಸದುಪಯೋಗ ಪಡೆದು ಉನ್ನತ ಸಾಧನೆ ಮಾಡಬೇಕು. ಕಲಿಕೆ ನಿರಂತರವಾಗಿರಬೇಕು. ಶಿಸ್ತು ಮತ್ತು ಸಮಯಪಾಲನೆ ಮಾಡಬೇಕು ಎಂದು ಹೇಮಾವತಿ ಅವರು ಸಲಹೆ ನೀಡಿದರು.

ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ ಅಧ್ಯಕ್ಷತೆ ವಹಿಸಿದ್ದು, ತರಬೇತುದಾರ ರಾದ ಮಾಧವಿ ರೈ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮಾಜಿ ಪ್ರಾದೇಶಿಕ ನಿರ್ದೇಶಕ ಕೆ. ಮಹಾವೀರ ಅಜ್ರಿ ಉಪಸ್ಥಿತರಿದ್ದರು.

ಸುಮಾರು ೭೦ ಮಂದಿ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಎಂ. ಸುರೇಶ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.