kallianpurdotcom: 9741001849
(ವರದಿ : ರೋನ್ಸ್ ಬಂಟ್ವಾಳ್)
ಮಂಗಳೂರು, ಫೆ.5;:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್ ,ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ,ಕೊಲ್ಲಮೊಗರು ಗ್ರಾಮ ಪಂಚಾ ಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯರು ಹಾಗೂ ಶ್ರೀ ಧರ್ಮಸ್ಥಳ ಕ್ಷೇತ್ರಧರ್ಮಾಧಿಕಾರಿ ಡಾ.ಡಿವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮ ದಲ್ಲಿಂದು ಬಿಡುಗಡೆ ಮಾಡಿದರು.
*ಶುಭ ಹಾರೈಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ:-
ಈ ಸಂದರ್ಭದಲ್ಲಿ ಡಾ.ಶ್ರೀ ವೀರೇಂದ್ರ ಹೆಗ್ಗಡೆ ಯವರು ಮಾತನಾಡುತ್ತಾ,ಮಹಾತ್ಮಗಾಂಧಿಯವರು ಸಮಸ್ಯೆ ತಿಳಿಯಲು ದೇಶಾದ್ಯಂತ ಜನ ಸಾಮಾನ್ಯರು ಸಂಚರಿಸುತ್ತಿದ್ದ ತೃತೀಯ ದರ್ಜೆಯ ರೈಲು ಬೋಗಿಯಲ್ಲಿ ಜನರ ಬಳಿ ತೆರಳುತ್ತಿದ್ದರು. ಅವರು ಜನರೊಂದಿಗೆ ಇದ್ದಾಗ ಜನ ಜೀವನ ಸಮಸ್ಯೆ ಅರ್ಥ ಮಾಡಿಕೊಳ್ಳಲು ಸಾಧ್ಯ. ಪತ್ರಕರ್ತರು ಗ್ರಾಮದ ಜನರ ಸಮಸ್ಯೆ ಬಗ್ಗೆ ಅರಿತು ಕೊಳ್ಳಲು ಗ್ರಾಮಕ್ಕೆ ತೆರಳಲು ಚಿಂತನೆ ಮಾಡಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾ ರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ,ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ,ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಂಚಾಯತ್ ಕಾರ್ಯ ದರ್ಶಿ ಡಾ.ರಘು ಮೊದಲಾದವರು ಉಪಸ್ಥಿತರಿದ್ದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.