Skip to main content
www.kallianpur.com | Email : kallianpur7@gmail.com | Mob : 9741001849

*ಕ್ರಿಯೇಟಿವ್‌ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ ಆರ್‌ ಅಂಬೇಡ್ಕರ್‌ ಜಯಂತಿ*

By April 14, 2023News

kallianpurdotcom : 14/04/23

ಉಡುಪಿ: ದಿನಾಂಕ 14-04-2023 ನೇ ಶುಕ್ರವಾರ ಸಂವಿಧಾನ ಶಿಲ್ಪಿ ಡಾ| ಬಿ ಆರ್‌ ಅಂಬೇಡ್ಕರ್‌ ರವರ 132 ನೇ ಜಯಂತಿಯನ್ನು ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್‌ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೊತ್ತರ ಪದವಿಗಳನ್ನು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ ಹೆಗ್ಗಳಿಕೆಯೂ ಇವರದ್ದು ಎಂಬುದನ್ನು ಸ್ಮರಿಸುತ್ತಾ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇವರು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶನ್‌ ಗೌಡ , ಆಡಳಿತಾಧಿಕಾರಿ ಜಯಪ್ರಕಾಶ್‌ ಶೆಟ್ಟಿ, ಉಪನ್ಯಾಸಕರಾದ ಸುಮಂತ ದಾಮ್ಲೆ, ಶಶಿರಾಜ್‌, ಕುಮಾರಿ ಅಕ್ಷತಾ, ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.