Skip to main content
www.kallianpur.com | Email : kallianpur7@gmail.com | Mob : 9741001849

ಕಲ್ಯಾಣಪುರದ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ನುಡಿ ನಮನ ಕಾರ್ಯಕ್ರಮ

By June 22, 2023Kannada News
kallianpurdotcom: 22/06/23

ಉಡುಪಿ : ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯ ಮಾಜಿ ಸಂಚಾಲಕರಾಗಿದ್ದ ಶ್ರೀ ಸಿ.ಕೆ. ಕಾಮತ್ ಅವರು ಇತ್ತೀಚೆಗೆ ನಿಧನರಾಗಿದ್ದ್ದು ಅವರಿಗೆ ನುಡಿನಮನ ಕಾರ್ಯಕ್ರಮವನ್ನು ದಿನಾಂಕ ೧೯.೬.೨೦೨೩ ರಂದು ಶಾಲೆಯಲ್ಲಿ ಏರ್ಪಡಿಸಲಾಗಿತ್ತು.

ಶಾಲಾಡಳಿತ ಮಂಡಳಿಯ ಸದಸ್ಯರಾದ ಶ್ರೀ ಗಣೇಶ್ ಶೇರಿಗಾರ್, ಸಂಚಾಲಕರಾದ ಶ್ರೀಮತಿ ಸುಮನ ಎಸ್.ಪೈ ಶಾಲಾಡಳಿತಾಧಿಕಾರಿ ಶ್ರೀ ಶೇಕರ್ ಪಿ., ನುಡಿ ನಮನ ಸಲ್ಲಿಸಿದರು. ಸೇರಿದ ಗಣ್ಯರು ಅಗಲಿದ ಅವರ ಆತ್ಮಕ್ಕೆ ಸದ್ಗತಿಗಾಗಿ ಮೌನ ಪ್ರಾರ್ಥನೆ ಸಲ್ಲಿಸಿದರು. ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಮರ್ಪಿಸಲಾಯಿತು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಮಾಧವ ಕೆ. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ರಮಾನಂದ ಸಾಲಿಯಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುರೇಖಾ ಶ್ರೀ ಸಿ.ಕೆ ಕಾಮತ್ ರ ಸುಪುತ್ರ ಡಾ. ಸಂತೋಷ್ ಕಾಮತ್, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ, ಶ್ರೀ ಸಿ.ಕೆ ಕಾಮತ್ ರವರ ಅಭಿಮಾನಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.