Skip to main content
www.kallianpur.com | Email : kallianpur7@gmail.com | Mob : 9741001849

ಡಾ.ಟಿ.ಎಂ.ಎ.ಪೈ ಪ್ರೌಢಶಾಲೆ, ಕಲ್ಯಾಣಪುರ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ-೨೦೨೩

By March 8, 2023Kannada News

kallianpurdotcom : 08/03/2023

ಉಡುಪಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿ: ೦೮.೦೩.೨೦೨೩ ರಂದು ಕಲ್ಯಾಣಪುರದ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಶಾಲಾ ಸುರಕ್ಷತಾ ಸಮಿತಿಯ ಸದಸ್ಯರಾಗಿರುವ ಶ್ರೀಮತಿ ಗ್ರೇಸಿ ಡಿಸೋಜಾರವರು ಆಗಮಿಸಿ, ಶಾಲೆಯ ಮಹಿಳಾ ಅಡುಗೆ ಸಿಬ್ಬಂದಿಯವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾಡಳಿತಾಧಿಕಾರಿ ಶ್ರೀಯುತ ಶೇಕರ್ ಪಿ.ರವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾರವರು ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕಿ ಶ್ರೀಮತಿ ದಿವ್ಯಲಕ್ಷ್ಮೀ ವಂದಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕೇತರ ವರ್ಗ ಹಳೆ ವಿದ್ಯಾರ್ಥಿನಿ ಕುಮಾರಿ ಧನ್ವಿ ಡಿ. ಸುವರ್ಣ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.