Skip to main content
www.kallianpur.com | Email : kallianpur7@gmail.com | Mob : 9741001849

ಕಲ್ಯಾಣಪುರ, ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ.

By June 21, 2024News
kallianpurdotcom: 9741001849

ಕಲ್ಯಾಣಪುರ: ಡಾ. ಟಿ.ಎಂ.ಎ. ಪೈ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿರುವ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಶ್ರೀ ನಾಗರಾಜ್‌ರವರು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿವೃತ್ತ ಅಧ್ಯಾಪಕರಾಗಿರುವ ಶ್ರೀಯುತ ಸತ್ಯಶಂಕರ್ ಭಟ್‌ರವರು ವಿದ್ಯಾರ್ಥಿಗಳು ಕೇವಲ ಅಂಕಗಳಿಸುವಿಕೆಗೆ ಮಾತ್ರ ಸೀಮಿತವಾಗಿರದೇ, ಸಹಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ಶಾಲಾ ಮುಖ್ಯಶಿಕ್ಷಕರಾಗಿರುವ ಶ್ರೀ ಹೆಚ್ ಎನ್ ವೆಂಕಟೇಶ್ ಸ್ವಾಗತಿಸಿದರು. ಶ್ರೀಮತಿ ದಿವ್ಯಲಕ್ಷ್ಮೀ ಕಾರ್ಯಕ್ರಮ ಸಂಯೋಜಿಸಿದರು. ಅಧ್ಯಾಪಕರಾದ ಶ್ರೀ ಪ್ರಕಾಶ್ ಶೆಟ್ಟಿ ಧನ್ಯವಾದ ನೀಡಿದರು. ವಿವಿಧ ಸಂಘಗಳ ಪದಾಧಿಕಾರಿ ಗಳಿಗೆ ಅತಿಥಿಗಳು ಪೆನ್’ನ್ನು ನೀಡಿ ಗುರುತಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಶ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.