Skip to main content
www.kallianpur.com | Email : kallianpur7@gmail.com | Mob : 9741001849

ಕಲ್ಯಾಣಪುರದ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ಕಲಿಕಾ ಪರಿಕರ ವಿತರಣೆ.

By July 5, 2023Kannada News
kallianpurdotcom: 05/07/23

ಉಡುಪಿ: ಕಲ್ಯಾಣಪುರದ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಣಿಪಾಲ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯ ಸಹಕಾರವನ್ನು ಪಡೆದು ಶಾಲಾಡಳಿತ ಮಂಡಳಿ ಕಲಿಕಾ ಪರಿಕರ ವಿತರಣೆಯನ್ನು ನಡೆಸಿತು.

ಶಾಲಾ ಸಂಚಾಲಕರಾದ ಶ್ರೀಮತಿ ಸುಮನಾ ಎಸ್. ಪೈ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿ ಉದ್ಯಮಿ ಶ್ರೀ ಕೇಶವ ಕೋಟ್ಯಾನ್ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಾಲಾ ಕಲಿಕಾ ಪರಿಕರ ವಿತರಿಸಿದರು. ಶಾಲಾಡಳಿತ ಮಂಡಳಿಯ ಸದಸ್ಯರಾದ ಶ್ರೀ ಗಣೇಶ್ ಶೇರಿಗಾರ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಆಡಳಿತಾಧಿಕಾರಿ ಶ್ರೀ ಶೇಕರ್ ಪೂಜಾರಿ ಆರ್ಥಿಕ ಸಹಕಾರ ನೀಡಿದ ಮಣಿಪಾಲ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುರೇಖ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಯುತ ಹೆಚ್.ಎನ್.ವೆಂಕಟೇಶ್ ಕಾರ್ಯಕ್ರಮ ಸಂಯೋಜಿಸಿದರು. ಶ್ರೀ ಸತ್ಯಶಂಕರ್ ಭಟ್ ವಂದಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.