(ಚಿತ್ರ /ವರದಿ : ತಾರ ರೋನ್ಸ್ ಬಂಟ್ವಾಳ್)
ಮುಂಬಯಿ, ಆ.೦೫: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಇಂದು (ಆ.೦೬) ಭಾನುವಾರ ಪೂರ್ವಾಹ್ನ ಲೋಟಸ್ ಸಭಾಗೃಹ, ಸಾಲೀಟರಿ ಕಾರ್ಪೋರೆಟ್ ಪಾರ್ಕ್, ಅಂಧೇರಿ ಪೂರ್ವ ಮುಂಬಯಿ ಇಲ್ಲಿ ಪತ್ರಕರ್ತರ ದಿನಾಚರಣೆ-೨೦೨೩ ಆಚರಿಸಲಿದೆ.
ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಜರುಗುವ ಸಮಾರಂಭವನ್ನು ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ಉದ್ಘಾಟಿಸುವರು. ಕಾರಕ್ರಮದಲ್ಲಿ ಪತ್ರಕರ್ತರ ಸಂಘದ ೨೦೨೨ ಮತ್ತು ೨೦೨೩ನೇ ವಾರ್ಷಿಕ ಶ್ರೀ ಕೆ.ಟಿ ವೇಣುಗೋಪಾಲ್ ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್.ವಿ ಅಮಿನ್ ಮತ್ತು ಪ್ರಶಸ್ತಿ ಸಮಿತಿ ಕಾರ್ಯಾಧ್ಯಕ್ಷೆ ಡಾ|ಸುನೀತಾ ಎಂ.ಶೆಟ್ಟಿ ಉಪಸ್ಥಿತರಿದ್ದು ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ಬೃಹನ್ಮುಂಬಯಿ ಅಲ್ಲಿನ ಹಿರಿಯ ಪತ್ರಕರ್ತ, ದಿವೋ ಕೊಂಕಣಿ ಸಾಪ್ತಾಹಿಕದ ಸಂಪಾದಕ ಲಾರೇನ್ಸ್ ಕುವೆಲ್ಹೋ ಅವರಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಾವಳಗಿ ಮೂಲತಃ ಸನತ್ ಕುಮಾರ ಬೆಳಗಲಿ ಇವರಿಗೆ ಪ್ರದಾನಿಸಲಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಈ ಪುರಸ್ಕಾರ ಪ್ರದಾನಿಸ ಲಾಗುವುದು ಮತ್ತು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಪ್ರಥಮ ಕೃತಿ, ಸಂಘದ ಸಲಹಾ ಸಮಿತಿಯ ಹಿರಿಯ ಸದಸ್ಯೆ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಗೊಳಿಸಲಾಗುವುದು ಎಂದು ಕಪಸಮ ಗೌ| ಪ್ರ| ಕಾರ್ಯದರ್ಶಿ ಸಾ.ದಯಾ (ದಯಾನಂದ್) ಮತ್ತು ಜೊತೆ ಕಾರ್ಯದರ್ಶಿ ಸವಿತಾ ಎಸ್.ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ ಎಂದು ಕಪಸಮ ಉಪಾಧ್ಯಕ್ಷ ಡಾ| ಶಿವ ಮೂಡಿಗೆರೆ, ಗೌ| ಪ್ರ| ಕಾರ್ಯದರ್ಶಿ ಸಾ.ದಯಾ (ದಯಾನಂದ್) ಮತ್ತು ಜೊತೆ ಕಾರ್ಯದರ್ಶಿ ಸವಿತಾ ಎಸ್.ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.