Skip to main content
www.kallianpur.com | Email : kallianpur7@gmail.com | Mob : 9741001849

*ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ*

By April 21, 2023April 24th, 2023News

kallianpurdotcom : 21/04/23

ಉಡುಪಿ: 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಎರಡನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 380 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಸ್ತುತ್‌ ಪಟೇಲ್‌ 592 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರ‍್ಯಾಂಕ್‌ , ಸುಮಂತ್‌ ಶೆಟ್ಟಿ 591 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್‌, ಆದಿತ್ಯ ಹೊಳ್ಳ 588, ಅಭಯ್‌ ಎಸ್‌ ಎಸ್‌ 588 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ‍್ಯಾಂಕ್‌, ಜಾಗೃತಿ ಕೆ ಪಿ 587 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ದಿವಿತ್‌ ಪಿ ಗೌಡ 590 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಕುಮಾರಿ ಅನಘ 589 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 380 ವಿದ್ಯಾರ್ಥಿಗಳಲ್ಲಿ , 67 ವಿದ್ಯಾರ್ಥಿಗಳು 95 ಶೇಕಡಾ ಕ್ಕಿಂತ ಅಧಿಕ, 211 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 298 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಭೌತಶಾಸ್ತ್ರದಲ್ಲಿ 16, ರಸಾಯನಶಾಸ್ತ್ರದಲ್ಲಿ 02, ಗಣಿತದಲ್ಲಿ 34, ಜೀವಶಾಸ್ತ್ರದಲ್ಲಿ 03, ಗಣಕ ವಿಜ್ಞಾನದಲ್ಲಿ 117, ವ್ಯವಹಾರ ಅಧ್ಯಯನದಲ್ಲಿ 14, ಲೆಕ್ಕಶಾಸ್ತ್ರದಲ್ಲಿ 10,   ಕನ್ನಡದಲ್ಲಿ 01, ಸಂಸ್ಕೃತದಲ್ಲಿ19 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿ ವಿಶೇಷ ಸಾಧನೆಗೈದಿದ್ದಾರೆ.
ಸಂಸ್ಥೆಯು ದ್ವಿತೀಯ ವರ್ಷದಲ್ಲೂ ಶೇ. 100 ಫಲಿತಾಂಶ ದಾಖಲಿಸುವುದರೊಂದಿಗೆ ಕರಾವಳಿ ಭಾಗದ ಕಾಲೇಜುಗಳಲ್ಲಿ ಮುಂಚೂಣಿ ಸ್ಥಾನದಲ್ಲಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವೃಂದದವರು ಸಂತಸ ವ್ಯಕ್ತಪಡಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.