Skip to main content

ಉಡುಪಿ ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಜೀವ ರಕ್ಷಣೆ ಕುರಿತು ಉಪನ್ಯಾಸ.

By June 18, 2025Kannada News
kallianpurdotcom: Mob 9741001849
Official release from  Creative P U College.

ಉಡುಪಿ: ಭಾರತದ ಸಂಪತ್ತಾಗಿರುವ ಯುವಜನರು ಅತಿ ಹೆಚ್ಚು ಪ್ರಮಾಣದಲ್ಲಿ ಅಪಘಾತಗಳಿಗೆ ಬಲಿಯಾಗುತ್ತಿದ್ದು ರಸ್ತೆ ಮತ್ತು ಸಂಚಾರಿ ನಿಯಮಗಳನ್ನು ಸರಿಯಾಗಿ ಅನುಸರಿಸದೇ ಪ್ರಾಣಹಾನಿ ಸಂಭವಿಸುತ್ತಿದೆ.18 ವರ್ಷದ ಒಳಗಿನ ಮಕ್ಕಳು ಯಾವುದೇ ಕಾರಣಕ್ಕೂ ಅಧಿಕೃತ ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಅಪಘಾತಗಳು ಉಂಟಾದ ಸಂದರ್ಭದಲ್ಲಿ ಅದಕ್ಕೆ ವಿಮಾ ಪರಿಹಾರ ಮೊತ್ತವೂ ದೊರೆಯುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ನಾಗರಿಕರು ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಉಡುಪಿ ಸಂಚಾರಿ ಪೊಲೀಸ್ ಅಧಿಕಾರಿ ಹುಸೇನ್ ಸಾಬ್‌ ಕೆ ಚಪ್ಪರಕರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಉಡುಪಿ ಕಲ್ಯಾಣಪುರದಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ ನೀಡುತ್ತಾ, ಭವಿಷ್ಯದ ಪ್ರಜೆಗಳು ಪ್ರಾಣ ರಕ್ಷಣೆ ಮತ್ತು ಹೊಣೆಗಾರಿಕೆ ಎರಡನ್ನೂ ನಿಭಾಯಿಸಬೇಕು. ರಸ್ತೆ ಸಂಚಾರಿ ನಿಯಮಗಳನ್ನು ಮನೆಯವರಿಗೆ ಮತ್ತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ಕಾರ್ಯ ನಡೆಸಿದರು.

ಸಂಚಾರಿ ಪೊಲೀಸ್ ಕಾನ್ಸ್ಟೇಬಲ್‌ ಶ್ರೀನಿವಾಸ್ ಎಸ್ ಎನ್ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಸ್ವಾಗತಿಸಿ, ವಂದಿಸಿ ದರು. ಕಾಲೇಜಿನ ಸಿಬ್ಬಂದಿಗಳಾದ ಮಹೇಶ್, ಕುಮಾರ್ರಾಠೋಡ್, ಅರುಣ್,ರವೀಶ್, ಯಮನಪ್ಪ, ಸಹನಾ ಸಹಕರಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.