Skip to main content
www.kallianpur.com | Email : kallianpur7@gmail.com | Mob : 9741001849

ಮಂಗಳೂರು ವಿವಿ ೪೧ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್.

By March 15, 2023News

(ಚಿತ್ರ / ವರದಿ : ತಾರ ರೋನ್ಸ್ ಬಂಟ್ವಾಳ್)

ಮುಂಬಯಿ (ಆರ್‌ಬಿಐ), ಮಾ.೧೫: ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳನ್ನು ಆದಷ್ಟು ಶೀಘ್ರವೇ ಕನ್ನಡದಲ್ಲಿ ತರುವ ಐತಿಹಾಸಿಕ ನಿರ್ಧಾರ ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಕೈಗೊಳ್ಳಲಾಗಿದೆ. ಸ್ಥಾನೀಯ ಭಾಷೆಯಲ್ಲೇ ಕಲಿತು ದೇಶದ ಅಭಿವೃದ್ಧಿಗೆ ತೀವ್ರತೆ ತುಂಬುವುದು ಇದರ ಉದ್ದೇಶವಾಗಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ೪೧ನೇ ಘಟಿಕೋತ್ಸವ ಇಂದಿಲ್ಲಿ ಬುಧವಾರ ಪೂರ್ವಾಹ್ನ ಕೋಣಾಜೆ ಇಲ್ಲಿನ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗಿದ್ದು ಈ ಬಾರಿ ಇಲ್ಲಿನ ೭ ಮಂದಿ ವಿದೇಶಿಗರೂ ಸೇರಿದಂತೆ ೧೧೫ ಮಂದಿಗೆ ಪಿ.ಹೆಚ್‌ಡಿ ಪದವಿ ಪ್ರದಾನಿಸಿ, ೫೫ ಮಂದಿಗೆ ಚಿನ್ನದ ಪದಕ, ೫೭ ನಗದು ಬಹುಮಾನ ವಿತರಿಸಿ, ೧೯೯ ಮಂದಿರ‍್ಯಾಂಕ್ ವಿಜೇತರಲ್ಲಿ ಪ್ರಥಮ ರ‍್ಯಾಂಕ್ ಪಡೆದ ೭೧ ಮಂದಿಗೆ ಪ್ರಮಾಣ ಪತ್ರ ಪ್ರದಾನಿಸಿ ರಾಜ್ಯಪಾಲ ಗೆಹ್ಲೋಟ್ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆಗೈದ ಮೂವರು ಸಾಧಕರಿಗೆ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದ್ದು, ಶಿಕ್ಷಣ ಮತ್ತು ಸಮಾಜಸೇವೆಯಲ್ಲಿ ಮಾಡಿದ ಸಾಧನೆಗಾಗಿ ಮಂಗಳೂರು ಇಲ್ಲಿನ ಕಣಚೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಹಾಜಿ ಯು.ಕೆ.ಮೋನು, ಸಮಾಜಸೇವೆಗಾಗಿ ಪ್ರೊ| ಎಂ.ಬಿ.ಪುರಾಣಿಕ್ ಮತ್ತು ಕೃಷಿ, ಶಿಕ್ಷಣ ಮತ್ತು ಸಮಾಜಸೇವೆ ಗಾಗಿ ಉದ್ಯಮಿ ಜಿ. ರಾಮಕೃಷ್ಣ ಆಚಾರ್ ಹಾಗೂ ಶಿಕ್ಷಣ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಗೆಹ್ಲೋಟ್ ಪ್ರದಾನಿಸಿ ಅಭಿನಂದಿ ಸಿದರು.

ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮೌಲೀಕರಣ ಮತ್ತು ವಿಶ್ವವಿದ್ಯಾನಿಲಯ ಶಿಕ್ಷಣದ ಪರಿಕಲ್ಪನೆ ನಾವು ಅರ್ಥಮಾಡಿಕೊಳ್ಳಬೇಕು ಎಂಬುದು ರಾಷ್ಟೀಯ ಶಿಕ್ಷಣ ನೀತಿಯ ಆಶಯ. ಅದು ನಮ್ಮ ಬಹು ಕಾರ್ಯ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಮಾನವೀಯ ಗುಣ ಮತ್ತು ಮಾನವಿಕ ಶಾಸ್ತ್ರದ ಅಧ್ಯಯನ ಇದಕ್ಕೆ ಅಗತ್ಯ. ನಮ್ಮಪ್ರಾಚೀನ ಜ್ಞಾನದ ಅರಿವು, ನಮ್ಮ ಸಂಸ್ಕೃತಿಯ ಶ್ರೀಮಂತಿಯ ಉಳಿವು, ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯ ಒಳ್ಳೆಯ ಅಂಶಗಳ ತಿಳಿವು ಬೇಕಾಗಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಸ್ವಾಗತಿಸಿ ಪ್ರಸ್ತಾವನೆಗೈದು ವಿಶ್ವವಿದ್ಯಾನಿಲಯದ ಸಾಧನೆ-ಉದ್ದೇಶಗಳನ್ನು ವಿವರಿಸಿ ಶೈಕ್ಷಣಿಕ ವರ್ಷ ೨೦೨೧-೨೨ರಲ್ಲಿ ಶೇಕಡಾ ೮೨.೭೨ ಪಲಿತಾಂಶ ದಾಖಲಾಗಿದೆ ಎಂದರು.

ಕುಲಸಚಿವ ಪ್ರೊ| ಕಿಶೋರ್ ಕುಮಾರ್ ಸಿ.ಕೆ, ಕುಲಸಚಿವ (ಪರೀಕ್ಷಾಂಗ) ಪ್ರೊ| ರಾಜು ಕೃಷ್ಣ ಚಲನ್ನವರ್, ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ನಿಖಾಯಗಳ ಡೀನ್‌ಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದರು. ಪ್ರಾಧ್ಯಾಪಕರುಗಳಾದ ಡಾ| ಧನಂಜಯ ಕುಂಬ್ಳೆ ಮತ್ತು ಪ್ರೀತಿ ಕೀರ್ತಿ ಡಿಸೋಜ ಕಾರ್ಯಕ್ರಮ ನಿರೂಪಿಸಿ ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.