Skip to main content
www.kallianpur.com | Email : kallianpur7@gmail.com | Mob : 9741001849

ಮೇ.೦೧; ಧರ್ಮಸ್ಥಳದಲ್ಲಿ ೫೨ನೇ ವಾರ್ಷಿಕ ಉಚಿತ ಸಾಮೂಹಿಕ ವಿವಾಹ.

By May 1, 2024Mumbai News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಏ.೩೦: ಧರ್ಮಸ್ಥಳದಲ್ಲಿ ಮೇ ಒಂದರಂದು ಬುಧವಾರ ಸಂಜೆ ಗಂಟೆ ೬.೪೫ ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೨ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.

ಈಗಾಗಲೆ ೧೨೩ ಜೊತೆ ವಧು-ವರರು ವಿವಾಹಕ್ಕೆ ಹೆಸರು ನೋಂದಾಯಿಸಿ ನೀಡಿದ ಪ್ರಮಾಣಪತ್ರಗಳು ಕ್ರಮಬದ್ಧ ವಾಗಿದ್ದಲ್ಲಿ ಸಾಮೂಹಿಕ ವಿವಾಹದಲ್ಲಿ ಮದುವೆಗೆ ಅವಕಾಶ ನೀಡಲಾಗಿದೆ. ವರನಿಗೆಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಲಾಗುವುದು.

ಬುಧವಾರ ಬೆಳಿಗ್ಗೆ ಧರ್ಮಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ವಧು-ವರರಿಗೆ ಸೀರೆ, ರವಿಕೆಕಣ, ಧೋತಿ ಮತ್ತು ಶಾಲು ವಿತರಿಸುವರು. ಸಂಜೆ ೫:೦೦ ಗಂಟೆಗೆ ವಧೂ-ವರರು ಭವ್ಯ ಮೆರವಣಿಗೆಯಲ್ಲಿದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತ ವರ್ಷಿಣಿ ಸಭಾಭವನಕ್ಕೆ ಹೋಗುವರು. ಅಲ್ಲಿ ಅವರವರ ಜಾತಿಸಂಪ್ರದಾಯದಂತೆ ಒಂದೇ ಮುಹೂರ್ತ ದಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ. ಸಾಮೂಹಿಕ ವಿವಾಹದಲ್ಲಿ  ಮದುವೆ ಆದವರಿಗೆ ಸರ್ಕಾರದ ವತಿಯಿಂದ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡಲಾಗುವುದು.

ಹೆಗ್ಗಡೆಯವರು ಹಾಗೂ ಚಲನಚಿತ್ರನಟ ದೊಡ್ಡಣ್ಣ ಶುಭಾಶಂಸನೆ ಮಾಡುವರು. ಬಳಿಕ ನೂತನ ದಂಪತಿಗಳು ದೇವರ ದರ್ಶನ ಗೈದು, ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ತಮ್ಮತಮ್ಮ ಊರಿಗೆ ತೆರಳುವರು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ೧೯೭೨ರಲ್ಲಿ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದು, ಪ್ರತಿ ವರ್ಷ ಇದನ್ನು ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ ೧೨,೭೭೭ ಜೊತೆ ಸಾಮೂಹಿಕ ವಿವಾಹ ದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.