Skip to main content
www.kallianpur.com | Email : kallianpur7@gmail.com | Mob : 9741001849

ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ.

By March 15, 2023Kannada News

(ಚಿತ್ರ / ವರದಿ : ತಾರ ರೋನ್ಸ್ ಬಂಟ್ವಾಳ್)

ಮುಂಬಯಿ (ಆರ್‌ಬಿಐ), ಮಾ.೧೫: ಬೆಂಗಳೂರುನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕಳೆದ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್  ಇಂದಾಜೆ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಪ್ರದಾನಿಸಿ ಅಭಿನಂದಿಸಿದರು.

ಕಂದಾಯ ಸಚಿವ ಆರ್.ಅಶೋಕ್, ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದು ಶ್ರೀನಿವಾಸ ನಾಯಕ್ ಇಂದಾಜೆ ಸೇರಿದಂತೆ ಅನೇಕ ಸಾಧಕ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯ ೨೦೨೧ನೇ ಸಾಲಿನ ವಾರ್ಷಿಕ ಪ್ರಶಸ್ತಿ ಯನ್ನು ಪ್ರದಾನಿಸಿದರು.

ಕಳೆದ ಎರಡು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ರುವ ಶ್ರೀನಿವಾಸ ನಾಯಕ್ ಉದಯ ಟಿವಿ ಸೇರಿದಂತೆ ಹಲವು ರಾಜ್ಯ ಹಾಗೂ ರಾಷ್ಟ್ರೀಯ ವಾಹಿನಿಗಳ ವರದಿಗಾರರಾಗಿ ಕೆಲಸ ನಿರ್ವಹಿಸಿ ರುವರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆಗಿರುವ ಶ್ರೀನಿವಾಸ್ ಪತ್ರಕರ್ತರ ಸಂಘದ ಮೂಲಕ ಗ್ರಾಮ ವಾಸ್ತವ್ಯ, ಬ್ರಾoಡ್ ಮಂಗಳೂರು ಕಾರ್ಯಕ್ರಮ ಸೇರಿದಂತೆ ಹಲವಾರು ಸಮಾಜ ಮುಖಿ ಚಟುವಟಿಕೆಗಳ ಮೂಲಕ ರಾಜ್ಯವನ್ನೇ ಗಮನ ಸೆಳೆದಿರುವರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.