Skip to main content

ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ.

By September 5, 2025Kannada News
kallianpurdotcom: Mob 9741001849

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ   ಶಿಕ್ಷಕರ ದಿನಾಚರಣೆ ಪ್ರಯುಕ್ತ “ಗುರುದೇವೋಭವ” ಕಾರ್ಯಕ್ರಮಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಆರಂಭಿಸಿ, ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು. ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು.

ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರೊಫೆಸರ್ ಎಂ. ಬಾಲಕೃಷ್ಣ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು ಕಟೀಲು, ಶ್ರೀ ರವಿ ಎಸ್ ಪೂಜಾರಿ. ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಡ್ಕ, ಶ್ರೀ ಕುಲದೀಪ್ ಕೆ ಆರ್ ಜೀವಶಾಸ್ತ್ರ ಉಪನ್ಯಾಸಕರು, ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಭಾಷಣಕಾರರಾಗಿ ಆಗಮಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೊಫೆಸರ್ ಎಂ ಬಾಲಕೃಷ್ಣ ಶೆಟ್ಟಿ  ವಿದ್ಯೆಗೆ ವಿನಯವೇ ಭೂಷಣ, ವಿದ್ಯಾವಂತರು ಬರೀ ಬುದ್ಧಿವಂತರಾದರೆ ಸಾಲದು, ವಿನಯವಂತರೂ ಆಗಬೇಕು ಸದ್ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ  ಬೆಳೆಸಿ ಕೊಳ್ಳಬೇಕು ಎಂಬ ಹಿತನುಡಿಗಳನ್ನಾಡಿದರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದಶ್ರೀ ಅಶ್ವತ್ ಎಸ್ ಎಲ್ ಆಶಯ ನುಡಿಗಳನ್ನಾಡಿದರು. ಇನ್ನೋರ್ವ ಸಹ ಸಂಸ್ಥಾಪ ಕರು,  ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದ  ಪ್ರಾಂಶುಪಾಲರೂ ಆಗಿರುವ ಶ್ರೀ ವಿದ್ವಾನ್ ಗಣಪತಿ ಭಟ್ ಸನ್ಮಾನಿತರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮತ್ತೋರ್ವ ಸಹಸಂಸ್ಥಾಪಕರಾದ  ಶ್ರೀ ಅಮೃತ್ ರೈ ಉಪಸ್ಥಿತರಿದ್ದರು, ಶ್ರೀ ಗಣಪತಿ ಭಟ್ ಕೆ ಎಸ್ “ಗುರುದೇವೋಭವ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಹೆಗಡೆ ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತಿಸುವುದರ ಜೊತೆಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪ ಪ್ರಾಂಶುಪಾಲರಾದ  ಶ್ರೀ ಜೋಯೆಲ್ ಮನೋಜ್ ಫರ್ನಾಂಡಿಸ್  ವಂದನಾರ್ಪಣೆ ಮಾಡಿದರು. ಕನ್ನಡ ಉಪನ್ಯಾಸಕಆದರ್ಶ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.