
kallianpurdotcom: Mob 9741001849
Official release from Creative PU College.
ಉಡುಪಿ – 2026–27ನೇ ಸಾಲಿನಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಾಸ್ಯಾ ಯಾದವ್ ಕುಂದರ್ ಅವರು ವಿದ್ಯಾರ್ಥಿನಿಯರ ಕರಾಟೆ – 40 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಉತ್ತಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಈ ಸ್ಪರ್ಧೆಯು 11-08-2026ರಂದು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು, ಕಲ್ಯಾಣಪುರದಲ್ಲಿ ನಡೆದಿದ್ದು, ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಲಾಸ್ಯಾ ಯಾದವ್ ಕುಂದರ್ ಅವರು ಸ್ಪರ್ಧೆಯಲ್ಲಿ ಆತ್ಮವಿಶ್ವಾಸ, ಶಿಸ್ತು, ಧೈರ್ಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಅವರ ಈ ಸಾಧನೆಯು ಕಾಲೇಜಿಗೆ ಹೆಮ್ಮೆ ತಂದಿದ್ದು, ಇತರ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ಭಾಗವಹಿಸಲು ಪ್ರೇರಣೆಯಾಗಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.