Skip to main content
www.kallianpur.com | Email : kallianpur7@gmail.com | Mob : 9741001849

ಉಜಿರೆ ರುಡ್‌ಸೆಟ್ ಸಂಸ್ಥೆಯ ೨೦೨೩-೨೪ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ.

By May 22, 2024Kannada News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಮೇ.೦೧: ಉಜಿರೆ ರುಡ್‌ಸೆಟ್ ಸಂಸ್ಥೆಯ ೨೦೨೩-೨೪ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರೂ ಆದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಇಂದಿಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ, ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಂ.ಸುರೇಶ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

೨೦೨೩-೨೪ರ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ಗುರಿಯನ್ನು ತಲುಪಲು ಕೆಲವು ಮಾರ್ಗದರ್ಶನವನ್ನು ತಿಳಿಸಿದರು. ಸಂಸ್ಥೆಯು ಕಳೆದ ವರ್ಷದಲ್ಲಿ ೭೬೨ ಶಿಭಿರಾರ್ಥಿಗಳಿಗೆ ವಿವಿಧ ತರಬೇತಿಗಳನ್ನು ಕೊಟ್ಟು ಅದರಲ್ಲಿ ೫೭೭ ಯುವಕ, ಯುವತಿ ಯರು ಸ್ವಂತ ಉದ್ಯೋಗ ವನ್ನು ಪ್ರಾರಂಬಿಸಿದ್ದಾರೆ. ಹೊಸ ತರಬೇತಿಗಳಾಗಿ ಕೋಳಿ ಸಾಕಾಣಿಕೆ, ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಮತ್ತು ಮದುಮಗಳ ಶೃಂಗಾರ ಮೊದಲಾದ ತರಬೇತಿಗಳನ್ನು ಹಮ್ಮಿಕೊಂಡಿರುತ್ತೇವೆ. ಕಳೆದ ವರ್ಷದಲ್ಲಿ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ಮತ್ತು ಸಂತೋಷ್ ಕುಮಾರ್ ತಿವಾರಿ (ನಿರ್ದೇಶಕರು, ಗ್ರಾಮೀಣ ಸಚಿವಾಲಯ ದೆಹಲಿ) ಸಂಸ್ಥೆಗೆ ಭೇಟಿನೀಡಿದ್ದರು. ಜೊತೆಗೆ ಬ್ಯಾಂಕ್‌ನ ಅಧಿಕಾರಿಗಳು, ಉದ್ಯಮಿಗಳು ಮತ್ತು ಸರಕಾರಿ ಉನ್ನತ ಅಧಿಕಾರಿಗಳು ಸಂಸ್ಥೆಗೆ ಭೇಟಿ ಸಂಸ್ಥೆಯ ಕಾರ್ಯವೈಖರಿ ಶ್ಲಾಘಿಸಿದರು ಎಂದು ಗಿರಿಧರ್ ಕಲ್ಲಾಪುರ ತಿಳಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.