Skip to main content

ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ” ವಿಶ್ವ ಯೋಗ ದಿನಾಚರಣೆ ” ಕಾರ್ಯಕ್ರಮ.

By June 23, 2026Kannada News
kallianpurdotcom: Mob 9741001849

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಸಂಪನ್ಮೂಲ ವ್ಯಕ್ತಿಗಳಾಗಿ  ಆಗಮಿಸಿದ್ದ, ಅಶೋಕ್ ಹೆಗಡೆ ಅವರು ನಾವು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗ ನಮ್ಮ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ, ಇಂದು ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲು ವಿಶ್ವಸಂಸ್ಥೆಯು ಅಂಗೀಕರಿಸಿದ ದಿನವಾಗಿದೆ, ಬರೀ ಈ ಒಂದು ದಿನಕ್ಕೆ ಸೀಮಿತವಾಗದೆ,  ನಮ್ಮ ಬದುಕಿನಲ್ಲಿ ದಿನ ನಿತ್ಯ ಯೋಗ ಮತ್ತು ಧ್ಯಾನದಲ್ಲಿ ನಮ್ಮನು ತೊಡಗಿಸಿಕೊಳ್ಳಬೇಕು, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಯೋಗ ಮತ್ತು ಧ್ಯಾನ ಸಹಾಯಕಾರಿಯೆಂದು ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳು ತಮ್ಮ  ದಿನಚರಿಯಲ್ಲಿ ಮಾಡಬಹುದಾದ ಯೋಗಾಸನಗಳನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸಿದರು, ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ಕನ್ನಡ ಉಪನ್ಯಾಸಕ ಆದರ್ಶ ಕಾರ್ಯಕ್ರಮ ನಿರೂಪಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.